ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 12ರಂದು ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಲಾಗಿದೆ. ಬೆಳಗ್ಗೆ 10:30 ರಿಂದ ಸಂಜೆ 6ರವರೆಗೆ ನಡೆಯುವ ಈ ಬಂದ್ಗೆ ಬೀದರ್ನಿಂದ ಚಾಮರಾಜನಗರದವರೆಗೆ ಬೆಂಬಲದ ನಿರೀಕ್ಷೆ ಇದೆ. ಮಂಡ್ಯದ ಡಿಸಿ ಕಚೇರಿ ಮುಂಭಾಗದಲ್ಲಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ವತಿಯಿಂದ ಸತ್ಯಾಗ್ರಹ ನಡೆಯಲಿದೆ.