ರಾಜ್ಯದಲ್ಲಿನ ಭ್ರಷ್ಟಾಚಾರ ಖಂಡಿಸಿ ವಾಟಾಳ್ ನಾಗರಾಜ್ ಈಡುಗಾಯಿ ಒಡೆಯುವ ಮೂಲಕ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದ ಸಂಜಯ ವೃತ್ತದಲ್ಲಿ ಕನ್ನಡ ಸೇನೆ ಸಂಘಟನೆಯೊಂದಿಗೆ ಪ್ರತಿಭಟನೆ ನಡೆಸಿದ ಅವರು, ಭ್ರಷ್ಟಾಚಾರದಿಂದ ರಾಜ್ಯವನ್ನು ಲೂಟಿ ಮಾಡಲಾಗುತ್ತಿದೆ. ಎಲ್ಲಾ ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಬಿಜೆಪಿ, ಜೆಡಿಎಸ್, ಕಾಂಗ್ರೇಸ್ ಮೂರು ಪಕ್ಷಗಳು ಭ್ರಷ್ಟಾಚಾರದಲ್ಲಿ ತೊಡಗಿವೆ. ಹೆಚ್ಚುತ್ತಿರುವ ಭ್ರಷ್ಟಾಚಾರ ನಿಗ್ರಹಕ್ಕೆ ಸುಪ್ರೀಂಕೋರ್ಟ್ನಿಂದ ಕಡಿವಾಣ ಆಗಬೇಕಿದೆ ಎಂದು ಆಗ್ರಹಿಸಿದ್ದಾರೆ.