ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಪರಾಷ್ಟ್ರಪತಿಗಳ ಜೊತೆಗಿದ್ದರು. ದೇವರ ದರ್ಶನದ ಬಳಿಕ ಉಪರಾಷ್ಟ್ರಪತಿಗಳು ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಆಪ್ತ ಸಮಾಲೋಚನೆ ನಡೆಸಿ, ಧರ್ಮಸ್ಥಳದ ಸಾಮಾಜಿಕ ಕಾರ್ಯಗಳ ಕುರಿತು ಚರ್ಚಿಸಿದರು.