ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಡೀಸೆಲ್ ಕೊರತೆಯಿಂದ ಜನ ಪರದಾಡುತ್ತಿದ್ದಾರೆ. ಮುಂಗಾರು ಹಂಗಾಮು ಆರಂಭವಾಗಿದ್ದು, ಟ್ರಾಕ್ಟರ್ಗಳಿಗೆ ಡೀಸೆಲ್ ಪಡೆಯಲು ರೈತರು ಪ್ಲಾಸ್ಟಿಕ್ ಕ್ಯಾನ್ಗಳನ್ನು ಹಿಡಿದು ಹೆಚ್ಪಿ ಪೆಟ್ರೋಲ್ ಬಂಕ್ ಮುಂದೆ ಸರದಿ ಸಾಲಿನಲ್ಲಿ ನಿಂತಿದ್ದಾರೆ. ಡೀಸೆಲ್ಗಾಗಿ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಜನಸಂದಣಿ ಹೆಚ್ಚಾಗಿದೆ.