ಇತ್ತೀಚೆಗಷ್ಟೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಜೊತೆ ಪ್ರತ್ಯೇಕ ಮಾತುಕತೆ ನಡೆಸಿ ಸುದ್ದಿಯಾಗಿದ್ದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಹೆಚ್ಡಿಕೆ ಅವರನ್ನು ಭೇಟಿಯಾಗಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ವಿಜಯಪುರ ನಗರ ಕ್ಷೇತ್ರದ ಶಾಸಕ, ಪುತ್ರನ ವಿವಾಹಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದ್ದಾರೆ.