ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಆದೇಶಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಮತ್ತು ಯಾರೂ ಕೂಡ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.