ದೂರು ನೀಡಲು ಬಂದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮುಂದಾದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಇದೀಗ ಮತ್ತಷ್ಟು ಆರೋಪಗಳು ಕೇಳಿಬಂದಿದೆ. ಆತ ಹಲವು ಮಹಿಳೆಯರ ಜತೆ ಅಕ್ರಮ ಸಂಬಂಧ ಹೊಂದಿದ್ದ ಎಂಬ ಆರೋಪವುಳ್ಳ ಆಡಿಯೋ ವೈರಲ್ ಆಗಿದೆ. ಇದೀಗ ಆತ ಮಹಿಳೆಯೊಬ್ಬರ ಜತೆ ಸಮವಸ್ತ್ರದಲ್ಲಿದ್ದುಕೊಂಡೇ ಚಕ್ಕಂದ ಆಡುತ್ತಿರುವ ವಿಡಿಯೋ ವೈರಲ್ ಆಗಿದೆ.