ತುಮಕೂರು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ತುಮಕೂರು ನಗರದ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದ್ದು, ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ಕಾರ್ಯಕ್ರಮದಲ್ಲಿ ಭಾಗಿಯಾದರು. ಇದೇ ವೇಳೆ, ಮುಸ್ಲಿಂ ಮಹಿಳೆಯೊಬ್ಬರು ಸಚಿವರ ಎದುರ ಕೂಗಾಡಿದ್ದು, ವಿಡಿಯೋ ಸದ್ಯ ವೈರಲ್ ಆಗುತ್ತಿದೆ.