ಕೌಲಾಲಂಪುರದಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ರಾತ್ರಿ ವಿಮಾನದ ಹಾರಾಟದ ವೇಳೆ ವ್ಯಕ್ತಿಯೊಬ್ಬ ಎಮರ್ಜೆನ್ಸಿ ಎಕ್ಸಿಟ್ (ತುರ್ತು ನಿರ್ಗಮನ) ಬಾಗಿಲನ್ನು ತೆರೆಯಲು ಯತ್ನಿಸಿದ್ದಾನೆ. ಈತನ ಕೃತ್ಯದಿಂದ ವಿಮಾನದಲ್ಲಿದ್ದ ಪ್ರಯಾಣಿಕರು ಆತಂಕಕ್ಕೊಳಗಾದರು, ತಕ್ಷಣವೇ ಕಾರ್ಯಪ್ರವೃತ್ತರಾದ ಸಿಬ್ಬಂದಿ ಮತ್ತು ಪ್ರಯಾಣಿಕರು ಆತನನ್ನು ತಡೆದು ಕಟ್ಟಿಹಾಕಿದರು.