ರಾಕಿಂಗ್ ಸ್ಟಾರ್ ಯಶ್ ಹಾಗೂ ಬಾಲಿವುಡ್ನ ಬ್ರಹ್ಮಾಂಡ ನಿರ್ಮಾಣದ ‘ರಾಮಾಯಣ’ ಚಿತ್ರದ ಕುರಿತು ಸದ್ಯ ಎಲ್ಲೆಡೆ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಬಹುನಿರೀಕ್ಷಿತ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ‘ರಾವಣ’ನ ವಿಶಿಷ್ಟ ಹಾಗೂ ಗಂಭೀರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರು ಶ್ರೀಲಂಕಾದಿಂದ ವಿಶೇಷ ವೀಡಿಯೊ ಹಂಚಿಕೊಳ್ಳುವ ಮೂಲಕ ಯಶ್ ಅವರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. (Source: Vivek Oberoin Instagram)