ತುಮಕೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ರಾಜಾರೋಷವಾಗಿ ನೀರಿನ ನಲ್ಲಿಗಳನ್ನು ಕಳವು ಮಾಡಲಾಗಿದೆ. ಸಾರ್ವಜನಿಕರ ಬಳಕೆಗೆ ಇರಿಸಲಾಗಿದ್ದ ನೀರಿನ ನಲ್ಲಿಗಳನ್ನು ಕಳ್ಳರು ದೋಚಿದ್ದು, ಇದರಿಂದ ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ಸಾರ್ವಜನಿಕ ಆಸ್ತಿಯ ಕಳ್ಳತನದ ಬಗ್ಗೆ ಜನ ಆತಂಕ ವ್ಯಕ್ತಪಡಿಸಿದ್ದಾರೆ. ಈ ಘಟನೆ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ.