ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಹಲವು ಗೊಂದಲಗಳು ಉಂಟಾಗಿರುವ ಸಂದರ್ಭದಲ್ಲೇ ಆ ಬಗ್ಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಜೊತೆಗಿದ್ದೇವೆ, ಮುಂದೆಯೂ ಇರ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.