ಕರ್ನಾಟಕದಲ್ಲಿ ಬೇಸಿಗೆಗೂ ಮುನ್ನವೇ ಉಷ್ಣಾಂಶ ಗಣನೀಯವಾಗಿ ಏರುತ್ತಿದ್ದು, ಬಹುತೇಕ ಜಿಲ್ಲೆಗಳು ಬಿರುಬಿಸಿಲಿನ ತೀವ್ರತೆಯಿಂದ ಬಳಲುತ್ತಿವೆ. ಪ್ರತಿದಿನವೂ ಸರಾಸರಿ ಒಂದು ಡಿಗ್ರಿಯಷ್ಟು ತಾಪಮಾನ ಏರಿಕೆಯಾಗುತ್ತಿದ್ದು, ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಎರಡೂ ಹೆಚ್ಚುತ್ತಿರುವುದು ಹವಾಮಾನ ಇಲಾಖೆಯ ಅಂಕಿ-ಅಂಶಗಳಿಂದ ಸ್ಪಷ್ಟವಾಗಿದೆ.