ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ಹೊರವಲಯದ ನಡುರಸ್ತೆಯಲ್ಲಿ ಬೃಹತ್ ಕರಡಿಯೊಂದು ಓಡಾಡುತ್ತಿರುವುದು ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಇದೇ ಕರಡಿ ಐದು ದಿನಗಳ ಹಿಂದಷ್ಟೇ ರೈತನೊಬ್ಬನ ಮೇಲೆ ದಾಳಿ ನಡೆಸಿ ಗಾಯಗೊಳಿಸಿತ್ತು. ಪದೇ ಪದೇ ಸಾರ್ವಜನಿಕ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷವಾಗುತ್ತಿರುವುದರಿಂದ ಅರಣ್ಯ ಇಲಾಖೆ ಕೂಡಲೇ ಇದನ್ನು ಸೆರೆಹಿಡಿಯಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.