ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಸೋಲಾರ್ ತಂತಿ ಬೇಲಿ ದಾಟಲು ಕಾಫಿ ಗಿಡಗಳನ್ನು ಕಿತ್ತು ಪುಂಡಾನೆಗಳು ಅಟ್ಟಹಾಸ ಮೆರೆದಿರುವ ಘಟನೆ ಬೇಲೂರು ತಾಲೂಕಿನ ಹೊಸಮನೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀನಿವಾಸ ಎಂಬುವವರ ಕಾಫಿ ತೋಟದಲ್ಲಿ ಕಾಣಿಸಿಕೊಂಡ ಮರಿಗಳು ಸೇರಿ ಐದು ಕಾಡಾನೆಗಳು, ವಿದ್ಯುತ್ ಶಾಕ್ನಿಂದ ತಪ್ಪಿಸಿಕೊಳ್ಳಲು ಐವತ್ತಕ್ಕೂ ಹೆಚ್ಚು ಕಾಫಿ ಗಿಡಗಳನ್ನು ಕಿತ್ತು ಹಾಕಿವೆ.