ಮುಂದಿನ 6 ತಿಂಗಳಲ್ಲಿ ಮುಖ್ಯಮಂತ್ರಿಯಾಗಿ ಬಂದು ಪುತ್ತೂರಿನ ಕಾಂಗ್ರೆಸ್ ಭವನ ಉದ್ಘಾಟನೆ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ಗೆ ಹಾರೈಸಿದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ರೈ ಪ್ರತಿಕ್ರಿಯೆ ನೀಡಿದ್ದಾರೆ. ಹಾಗೆ ಹೇಳಲು ಕಾರಣ ಏನೆಂಬುದನ್ನು ಅವರು ವಿವರಿಸಿದ್ದಾರೆ.