ಶಿವಮೊಗ್ಗದ ಮದುವೆ ಸಮಾರಂಭಗಳಲ್ಲಿ ಸರಣಿ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಮದುವೆ ಸಮಾರಂಭಗಳನ್ನೇ ಗುರಿಯಾಗಿಸಿಕೊಂಡು ಚಿನ್ನಾಭರಣ ಕದಿಯುತ್ತಿದ್ದ ರಫೂನ್ ಫಿರ್ದೋಸ್ ಎಂಬ ಮಹಿಳೆಯನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ.