ಬೆಳಗಾವಿಯ ಜ್ಯೋತಿ ನಗರದಲ್ಲಿ ಕೌಟುಂಬಿಕ ಕಲಹ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಶ್ರೀನಿಧಿ ನಾವಿ (28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2021ರಲ್ಲಿ ಸಂತೋಷ್ ನಾವಿ ಅವರನ್ನು ವಿವಾಹವಾಗಿದ್ದ ಶ್ರೀನಿಧಿಗೆ ಇಬ್ಬರು ಮಕ್ಕಳಿದ್ದಾರೆ. ಈ ಸಂಬಂಧ ಪೊಲೀಸರು ಪತಿ ಸಂತೋಷ್ ನಾವಿಯನ್ನು ಬಂಧಿಸಿದ್ದಾರೆ. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.