ಬ್ರೆಜಿಲ್ನ ರಿಯೋ ಡಿ ಜನೈರೋದಲ್ಲಿ ವಿಶ್ವದ ಮೊಟ್ಟಮೊದಲ ಎಐ ನಗರ ಅಭಿವೃದ್ಧಿಗೊಳ್ಳುತ್ತಿದೆ. 9 ಲಕ್ಷ ಚದರ ಮೀಟರ್ ವಿಸ್ತೀರ್ಣದಲ್ಲಿ, ಈ ಸ್ಮಾರ್ಟ್ ಸಿಟಿ ಎಐ ಕಂಪನಿಗಳು ಮತ್ತು ಸಂಶೋಧನಾ ಸಂಸ್ಥೆಗಳಿಗೆ ಆಧುನಿಕ ಪರಿಸರ ವ್ಯವಸ್ಥೆಯನ್ನು ಒದಗಿಸುತ್ತದೆ. ಇದು 10 ಸಾವಿರಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿ ತಂತ್ರಜ್ಞಾನ ಆವಿಷ್ಕಾರವನ್ನು ಉತ್ತೇಜಿಸಲಿದೆ.