ನಿರ್ಮಾಣ ಹಂತದ ಎಕ್ಸ್​ಪ್ರೆಸ್​ ಹೈವೇಯಲ್ಲಿ ಅಪಘಾತ, ನಾಲ್ವರು ಸಾವು

×

ನಿರ್ಮಾಣ ಹಂತದ ಎಕ್ಸ್​ಪ್ರೆಸ್​ ಹೈವೇಯಲ್ಲಿ ಅಪಘಾತ, ನಾಲ್ವರು ಸಾವು

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂ ಡಿಬಿಎಲ್ ಕ್ಯಾಂಪ್ ಬಳಿ ನಿರ್ಮಾಣ ಹಂತದ ಚೆನ್ನೈ-ಸೂರತ್ ಎಕ್ಸ್‌ಪ್ರೆಸ್‌ ಹೈವೇಯಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದ ಗೋಡೆಗೆ ಡಿಕ್ಕಿಯಾಗಿ ನಾಲ್ವರು ಯುವಕರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತರನ್ನು ಗುರುರಾಜ್ ಚವ್ಹಾಣ್, ರೆಡ್ಡಿ ರಾಠೋಡ್, ಗೋವಿಂದ ಚವ್ಹಾಣ್ ಹಾಗೂ ಕುಮಾರ್ ರಾಠೋಡ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲಿಸಿದ್ದು, ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bhavana Hegde