ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ದೇವಸ್ಥಾನದ ಬಳಿ ನವಜಾತ ಗಂಡು ಮಗು ಬ್ಯಾಗ್ನಲ್ಲಿ ಪತ್ತೆಯಾಗಿದೆ. ಮಗುವಿನ ಅಳು ಕೇಳಿ ಸಾರ್ವಜನಿಕರು ಇದನ್ನು ಗಮನಿಸಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಗುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಗುವನ್ನು ತ್ಯಜಿಸಿದ ಪೋಷಕರ ಬಗ್ಗೆ ತನಿಖೆ ನಡೆಯುತ್ತಿದೆ.