ಚಿತ್ರದುರ್ಗದಲ್ಲಿ ಮೇ 9 ರಂದು ಆಯೋಜಿಸಲಾಗಿರುವ ಬಿಎಸ್ ಯಡಿಯೂರಪ್ಪ ಅವರ ‘ಬಿಎಸ್ವೈ ಅಭಿಮಾನೋತ್ಸವ’ದ ವಿರುದ್ಧ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಮೇಲೆ ಒತ್ತಡ ಹೇರಲು ಮತ್ತು ತಮ್ಮ ಮಗನ ರಾಜಕೀಯ ಭವಿಷ್ಯಕ್ಕಾಗಿ ಈ ರೀತಿ ಬಲಪ್ರದರ್ಶನ ಮಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.