ಆರ್ಎಸ್ಎಸ್ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಬೇಕೆಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಖರ್ಗೆಗೆ ಆರ್ಎಸ್ಎಸ್ ಮತ್ತು ಹಿಂದೂಗಳ ಬಗ್ಗೆ ಅಲರ್ಜಿ ಇದೆ ಎಂದು ಆರೋಪಿಸಿದ ಯತ್ನಾಳ್, ತಮ್ಮ ವ್ಯಾಪ್ತಿ ಮೀರಿ ಮಾತನಾಡುವುದು ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದ್ದಾರೆ.