ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಮಗೆ ಮಂತ್ರಿಗಿರಿ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆಂಬ ವದಂತಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಸಿದ್ದರಾಮಯ್ಯ ಹಾಗೆ ಹೇಳಿಲ್ಲ, ಬದಲಿಗೆ ಮುಸ್ಲಿಂ ಸಮಾಜದವರಿಗೆ ಆದ್ಯತೆ ನೀಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ಜಮೀರ್ ತಿಳಿಸಿದ್ದಾರೆ. ಸಿದ್ಧರಾಮಯ್ಯರನ್ನು ಭೇಟಿ ಮಾಡಿದ ಬಳಿಕ ಈ ಸ್ಪಷ್ಟನೆ ನೀಡಿದ್ದಾರೆ.