ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಶಕ್ತಿ ಪ್ರದರ್ಶನ ನಡೆಸಿದ ಮೃತ್ಯುಂಜಯ ಸ್ವಾಮೀಜಿ, ಬಸನಗೌಡ ಯತ್ನಾಳ್

ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಶಕ್ತಿ ಪ್ರದರ್ಶನ ನಡೆಸಿದ ಮೃತ್ಯುಂಜಯ ಸ್ವಾಮೀಜಿ, ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 10, 2024 | 7:42 PM

ಸ್ವಾಮೀಜಿ, ಯತ್ನಾಳ್ ಮತ್ತು ಶಾಸಕ ಅರವಿಂದ ಬೆಲ್ಲದ್ ಚೆನ್ನಮ್ಮನ ಪ್ರತಿಮೆ ಪುಷ್ಟಮಾಲೆ ಹಾಕಲು ಮೇಲೆ ಹತ್ತಿದಾಗ ಕೆಳಗೆ ನಿಂತಿದ್ದ ಪಂಚಮಸಾಲಿ ಸಮುದಾಯವರು, ಅಮಾಯಕರ ಮೇಲೆ ಲಾಠಿಚಾರ್ಜ್ ಮಾಡುವ ಸರ್ಕಾರಕ್ಕೆ ಧಿಕ್ಕಾರ, ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ, ಬೇಕೇ ಬೇಕು 2ಎ ಮೀಸಲಾತಿ ಬೇಕು, ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಜಯವಾಗಲಿ ಅಂತ ಘೋಷಣೆಗಳನ್ನು ಕೂಗುತ್ತಿದ್ದರು.

ಬೆಳಗಾವಿ: ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಲಿಂಗಾಯತ ಸಮುದಾಯದ ಮೇಲೆ ಲಾಠಿಚಾರ್ಜ್ ಮಾಡಿದ ಸರ್ಕಾರದಿಂದ ರೊಚ್ಚಿಗೆದ್ದಿರುವ ಪ್ರತಿಭಟನೆಕಾರರು ಇಂದು ಸಾಯಂಕಾಲ ನಗರದ ಚೆನ್ನಮ್ಮ ಸರ್ಕಲ್ ನಲ್ಲಿ ಶಕ್ತಿ ಪ್ರದರ್ಶನ ನಡೆಸಿದರು. ಪ್ರತಿಭಟನೆ ಪಾಲ್ಗೊಂಡವರು ತಮ್ಮ ಮೇಲೆ ನಡೆದ ಹಲ್ಲೆಯ ವಿವರವನ್ನು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿಸಿ ಪಾಟೀಲ್ ಹಾಗೂ ಇತರ ನಾಯಕರಿಗೆ ನೀಡಿದರು. ನಂತರ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ವಿಕೋಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಯತ್ನಾಳ್, ಸ್ವಾಮೀಜಿ ಸೇರಿದಂತೆ ಹಲವರು ಪೊಲೀಸ್ ವಶಕ್ಕೆ