ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
Shreyas Iyer: ಶ್ರೇಯಸ್ ಅಯ್ಯರ್ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ. ಜೂನ್ 26 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ಎರಡು ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಇಂಗ್ಲೆಂಡ್ ವಿರುದ್ಧ 5 ಮ್ಯಾಚ್ಗಳ ಟಿ20 ಸರಣಿ ನಡೆಯಲಿದೆ.
ಟೀಮ್ ಇಂಡಿಯಾದ ನೂತನ ಟಿ20 ನಾಯಕರಾಗಿ ಶ್ರೇಯಸ್ ಅಯ್ಯರ್ ನೇಮಕವಾಗುತ್ತಿದ್ದಂತೆ, ಅವರ ತಂದೆ ಸಂತೋಷ್ ಅಯ್ಯರ್ (ನೀಲಿ ಬಣ್ಣದ ಶರ್ಟ್) ಅವರು ನೃತ್ಯದ ಮೂಲಕ ಸಂಭ್ರಮಿಸಿರುವ ವಿಡಿಯೋ ವೈರಲ್ ಆಗಿದೆ. ಸಂತೋಷ್ ಅಯ್ಯರ್ ಅವರು ತಮ್ಮ ನಿವಾಸದಲ್ಲಿ ಸ್ನೇಹಿತರು ಮತ್ತು ಹಿತೈಷಿಗಳೊಂದಿಗೆ ಟೀಮ್ ಇಂಡಿಯಾ ಘೋಷಣೆಗಾಗಿ ಕಾಯುತ್ತಿದ್ದರು.
ಇತ್ತ ನಾಯಕನಾಗಿ ಶ್ರೇಯಸ್ ಅಯ್ಯರ್ ಹೆಸರು ಘೋಷಿಸಿದ ಬೆನ್ನಲ್ಲೇ ಸ್ನೇಹಿತರೊಂದಿಗೆ ಸೇರಿ ಅತ್ಯಂತ ಉತ್ಸಾಹದಿಂದ ನೃತ್ಯ ಮಾಡಿದ್ದಾರೆ. ಈ ಹಿಂದೆ ಶ್ರೇಯಸ್ ಅವರನ್ನು ಟಿ20 ತಂಡದಿಂದ ಕೈಬಿಟ್ಟಾಗ ಅವರ ತಂದೆ ತೀವ್ರ ಬೇಸರ ಮತ್ತು ನಿರಾಶೆಯನ್ನು ವ್ಯಕ್ತಪಡಿಸಿದ್ದರು.
ಇದೀಗ ಭಾರತ ಟಿ20 ತಂಡಕ್ಕೆ ನಾಯಕನಾಗಿ ಶ್ರೇಯಸ್ ಅಯ್ಯರ್ ಕಂಬ್ಯಾಕ್ ಮಾಡಿದ್ದಾರೆ. ಬಿಸಿಸಿಐ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ ಬೆನ್ನಲ್ಲೇ ಅಯ್ಯರ್ ಕುಟುಂಬದ ಈ ಅಪೂರ್ವ ಸಂಭ್ರಮಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗಿದೆ.
ಅಂದಹಾಗೆ ಶ್ರೇಯಸ್ ಅಯ್ಯರ್ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ. ಜೂನ್ 26 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ಎರಡು ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಇಂಗ್ಲೆಂಡ್ ವಿರುದ್ಧ 5 ಮ್ಯಾಚ್ಗಳ ಟಿ20 ಸರಣಿ ನಡೆಯಲಿದೆ.
ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್. ಸಿರಾಜ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ.
Video Source: X.com

