60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
Shreyas Iyer Health Update: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಸಿಡ್ನಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಸಂಪೂರ್ಣ ಫಿಟ್ನೆಸ್ ಸಾಧಿಸಿರುವ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಅಭ್ಯಾಸ ಶುರು ಮಾಡಿದ್ದಾರೆ.
ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಮತ್ತೆ ಮೈದಾನಕ್ಕಿಳಿದಿದ್ದಾರೆ. ಅದು ಕೂಡ ಬರೋಬ್ಬರಿ 60 ದಿನಗಳ ನಂತರ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಅಯ್ಯರ್ ಅಕ್ಟೋಬರ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಂಡಿರುವ ಅವರು ಬೆಂಗಳೂರಿನ ಸಿಒಇ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ.
ಶ್ರೇಯಸ್ ಅಯ್ಯರ್ 2 ತಿಂಗಳುಗಳ ಬಳಿಕ ನೆಟ್ಸ್ನಲ್ಲಿ ಅಭ್ಯಾಸ ನಡೆಸಿದ್ದು, ಹೀಗಾಗಿ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಅವರನ್ನು ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿಯಬಹುದು. ಹೀಗಾಗಿಯೇ ಇದೀಗ ನೆಟ್ಸ್ನಲ್ಲಿ ಬೆವರಿಳಿಸಲಾರಂಭಿಸಿದ್ದಾರೆ.
ಶ್ರೇಯಸ್ ಅಯ್ಯರ್ಗೆ ಏನಾಗಿತ್ತು?
ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು.