IND vs AUS 4th T20I: ರಾಯ್ಪುರದಲ್ಲಿ ಶ್ರೇಯಸ್ ಅಯ್ಯರ್ ಭರ್ಜರಿ ಅಭ್ಯಾಸ: ಸ್ಫೋಟಕ ಆಟಕ್ಕೆ ರೆಡಿ
Shreyas Iyer, India vs Australia 4th T20I: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ಉಪನಾಯಕ ಶ್ರೇಯಸ್ ಅಯ್ಯರ್ ಆಗಮನದಿಂದ ಮೆನ್ ಇನ್ ಬ್ಲೂ ಬ್ಯಾಟಿಂಗ್ ಬಲ ಹೆಚ್ಚಿದೆ. ಲಕ್ ವರ್ಮ ತನ್ನ ಸ್ಥಾನವನ್ನು ಹಿರಿಯ ಬ್ಯಾಟರ್‌ಗೆ ಬಿಟ್ಟುಕೊಡಲಿದ್ದಾರೆ. ಈಗಾಗಲೇ ರಾಯ್ಪುರದಲ್ಲಿರುವ ಅಯ್ಯರ್ ಭರ್ಜರಿ ಅಭ್ಯಾಸ ಕೂಡ ನಡೆಸುತ್ತಿದ್ದಾರೆ.
ಗುವಾಹಟಿಯಲ್ಲಿ ಸರಣಿಯನ್ನು ವಶಪಡಿಸಿಕೊಳ್ಳುವ ಅವಕಾಶವನ್ನು ಕಳೆದುಕೊಂಡಿರುವ ಭಾರತವು ಶುಕ್ರವಾರ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾವನ್ನು ನಾಲ್ಕನೇ ಟಿ20 ಪಂದ್ಯದಲ್ಲಿ ಎದುರಿಸಲಿದೆ. ಇತ್ತೀಚೆಗೆ ಮುಕ್ತಾಯಗೊಂಡ 2023 ರ ವಿಶ್ವಕಪ್‌ನಲ್ಲಿ ಭಾರತ ಪರ ಅದ್ಭುತ ಪ್ರದರ್ಶನ ತೋರಿ ಆರಂಭಿಕ ಮೂರು T20I ಗಳಿಗೆ ವಿಶ್ರಾಂತಿ ಪಡೆದಿದ್ದ ಶ್ರೇಯಸ್ ಅಯ್ಯರ್ (Shreyas Iyer) ಇಂದು ಕಮ್ಬ್ಯಾಕ್ ಮಾಡಲಿದ್ದಾರೆ. ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್ಪುರದಲ್ಲಿ ಅಯ್ಯರ್ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ. ತಿಲಕ್ ವರ್ಮಾ ಜಾಗದಲ್ಲಿ ಅಯ್ಯರ್ ಸ್ಥಾನ ಪಡೆಯಲಿದ್ದು, ಇವರು ಉಪನಾಯಕ ಕೂಡ ಆಗಿದ್ದಾರೆ. ಇಂದಿನ ಪಂದ್ಯ ಗೆದ್ದರೆ ಟೀಮ್ ಇಂಡಿಯಾ ಸರಣಿ ವಶಪಡಿಸಿಕೊಳ್ಳಲಿದೆ. ಆಸ್ಟ್ರೇಲಿಯಾ ಸರಣಿ ಕೈವಶ ಮಾಡಬೇಕು ಎಂದಿದ್ದರೆ ಉಳಿದ ಎರಡೂ ಪಂದ್ಯವನ್ನು ಗೆಲ್ಲಬೇಕಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Dec 01, 2023 11:39 AM