AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿದಾಗ ಶ್ರೀ ಸಿದ್ದೇಶ್ವರ ಸ್ವಾಮೀಜಿ ಧ್ವನಿಯನ್ನು ಗುರುತಿಸಿದರು: ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು

ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿದಾಗ ಶ್ರೀ ಸಿದ್ದೇಶ್ವರ ಸ್ವಾಮೀಜಿ ಧ್ವನಿಯನ್ನು ಗುರುತಿಸಿದರು: ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Jan 02, 2023 | 11:39 AM

Share

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರೆ ಮಾಡಿದಾಗಲೂ ಸ್ವಾಮೀಜಿ ಅವರ ಧ್ವನಿ ಗುರುತು ಹಿಡಿದರು ಎಂದು ಬೊಮ್ಮಾಯಿ ಹೇಳಿದರು.

ಬೆಂಗಳೂರು: ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯ ಸಿದ್ದೇಶ್ವರ ಸ್ವಾಮೀಜಿ (Shri Siddeshwara Swamiji) ಅವರ ಅನಾರೋಗ್ಯ ನಾಡಿನ ಜನತೆಯಲ್ಲಿ ಆತಂಕವನ್ನುಂಟು ಮಾಡಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೇಳುವ ಪ್ರಕಾರ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ ಮತ್ತು ಆತಂಕಪಡುವ ಅವಶ್ಯಕತೆಯಿಲ್ಲ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಮುಖ್ಯಮಂತ್ರಿಗಳು, ಶ್ರೀಗಳ ಎಲ್ಲ ಪ್ರಮುಖ ಅಂಗಾಗಗಳು (vital organs) ಸೂಕ್ತವಾಗಿ ಕಾರ್ಯನಿರ್ವಹಿಸುತ್ತಿವೆ ಮತ್ತು ತಾವು ಭೇಟಿಯಾದಾಗ ಗುರುತು ಹಿಡಿದರು ಎಂದು ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಕರೆ ಮಾಡಿದಾಗಲೂ ಸ್ವಾಮೀಜಿ ಅವರ ಧ್ವನಿ ಗುರುತು ಹಿಡಿದರು ಎಂದು ಬೊಮ್ಮಾಯಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ