‘ನಮಸ್ಕಾರ ಬೆಂಗಳೂರು’ ಕರ್ನಾಟಕ, ಬೆಂಗಳೂರಿನ ಬಗ್ಗೆ ತಮಗಿರುವ ಗೌರವ ಹಂಚಿಕೊಂಡ ಶ್ರಿಯಾ ಶರಣ್

Updated on: Aug 19, 2023 | 9:45 PM

Shriya Saran: ಇಂಡಿಯಾ ಪ್ರೈಡ್ ಪ್ರಶಸ್ತಿ ಪ್ರದಾನ ಸಮಾರಂಭದ ಅತಿಥಿಯಾಗಿ ಬೆಂಗಳೂರಿಗೆ ಆಗಮಿಸಿದ್ದ ನಟಿ ಶ್ರಿಯಾ ಶರಣ್, ಬೆಂಗಳೂರಿನ ಮೇಲಿರುವ ತಮ್ಮ ಪ್ರೀತಿಯ ಬಗ್ಗೆ ಮಾತನಾಡಿದರು.

ಪ್ಯಾನ್ ಇಂಡಿಯಾ (Pan India) ನಟಿ ಶ್ರಿಯಾ ಶರಣ್ (Sriya Saran) ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿನ ಯಶವಂತಪುರದಲ್ಲಿ ನಡೆದ ಪ್ರೈಡ್ ಇಂಡಿಯಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದ ಶ್ರಿಯಾ, ಅರ್ಹ ಉದ್ಯಮ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದರು, ಅವರ ಸಾಹಸವನ್ನು ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಶ್ರಿಯಾ ಶರಣ್, ‘ನಮಸ್ಕಾರ ಬೆಂಗಳೂರು’ ಎಂದು ಮಾತು ಆರಂಭಿಸಿ, ಬೆಂಗಳೂರಿನ ಬಗ್ಗೆ ತಮಗಿರುವ ಪ್ರೀತಿ ಹಂಚಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More