Shruti Haasan: ರಾಜಮೌಳಿ ಸಿನಿಮಾ ಈವೆಂಟ್​ಗಾಗಿ ಹಾಡಿದ ಶ್ರುತಿ ಹಾಸನ್

Edited By:

Updated on: Nov 11, 2025 | 12:38 PM

ಶ್ರುತಿ ಹಾಸನ್ ಅವರು ಕೇವಲ ನಟಿ ಮಾತ್ರ ಅಲ್ಲ. ಅವರು ಒಳ್ಳೆಯ ಹಾಡುಗಾರ್ತಿ ಕೂಡ ಹೌದು. ಈ ಮೊದಲು ಕೂಡ ಸಾಕಷ್ಟು ಹಾಡುಗಳನ್ನು ಅವರು ಹಾಡಿದ ಉದಾಹರಣೆ ಇದೆ. ಈಗ ಅವರ ವಿಡಿಯೋ ಒಂದು ವೈರಲ್ ಆಗಿದೆ. ಇವರು ರಾಜಮೌಳಿ ಸಿನಿಮಾಗಾಗಿ ಹಾಡಿದ್ದಾರೆ.

ರಾಜಮೌಳಿ-ಮಹೇಶ್ ಬಾಬು ಹೊಸ ಸಿನಿಮಾದ ಈವೆಂಟ್ ನವೆಂಬರ್ 15ರಂದು ನಡೆಯಲಿದೆ. ಈ ಈವೇಂಟ್​​ಗಾಗಿ ಒಂದು ಹಾಡನ್ನು ಸಿದ್ಧಪಡಿಸಿದ್ದಾರೆ ಸಂಗೀತ ಸಂಯೋಜಕ ಎಂಎಂ ಕೀರವಾಣಿ. ಈ ಹಾಡಿಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಈವೆಂಟ್​ನಲ್ಲಿ ರಾಜಮೌಳಿ ಸಿನಿಮಾದ ಟೈಟಲ್ ಘೋಷಣೆ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 11, 2025 12:06 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More