IPL 2025: ಗುಜರಾತ್ ಟೈಟನ್ಸ್ ಪರ ದಾಖಲೆ ಬರೆದ ಶುಭ್ಮನ್ ಗಿಲ್; ವಿಡಿಯೋ
Shubman Gill: ಶುಭ್ಮನ್ ಗಿಲ್ ಅವರು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 60 ರನ್ಗಳ ಇನ್ನಿಂಗ್ಸ್ ಆಡಿದರು. ಇದರೊಂದಿಗೆ ಗುಜರಾತ್ ಟೈಟನ್ಸ್ ಪರ ಐಪಿಎಲ್ ನಲ್ಲಿ 2000 ರನ್ ಗಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. 2024ರ ಐಪಿಎಲ್ ನಲ್ಲಿ ತಂಡದ ನಾಯಕನಾಗಿ ಆಯ್ಕೆಯಾದ ಗಿಲ್ 12 ಪಂದ್ಯಗಳಲ್ಲಿ 426 ರನ್ ಗಳಿಸಿದ್ದರೂ ಪ್ಲೇ ಆಫ್ ತಲುಪಲು ಸಾಧ್ಯವಾಗಿಲ್ಲ.
ಲಕ್ನೋ ಸೂಪರ್ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 60 ರನ್ಗಳ ಇನ್ನಿಂಗ್ಸ್ ಆಡಿದ ಗುಜರಾತ್ ಟೈಟನ್ಸ್ ನಾಯಕ ಶುಭ್ಮನ್ ಗಿಲ್ ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಈ ಅರ್ಧಶತಕದ ಇನ್ನಿಂಗ್ಸ್ನೊಂದಿಗೆ ಗಿಲ್, ಗುಜರಾತ್ ಟೈಟಾನ್ಸ್ ಪರ ಐಪಿಎಲ್‌ನಲ್ಲಿ 2000 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. 2024 ರ ಐಪಿಎಲ್‌ನಲ್ಲಿ ಮೊದಲ ಬಾರಿಗೆ ಗುಜರಾತ್ ತಂಡದ ನಾಯಕತ್ವವಹಿಸಿಕೊಂಡಿದ್ದ ಗಿಲ್ ಆ ಸೀಸನ್‌ನಲ್ಲಿ ಆಡಿದ್ದ 12 ಪಂದ್ಯಗಳಲ್ಲಿ ಒಟ್ಟು 426 ರನ್ ಗಳಿಸಿದರು. ಆದಾಗ್ಯೂ ತಂಡವನ್ನು ಪ್ಲೇಆಫ್‌ಗೆ ಕೊಂಡೊಯ್ಯಲು ಸಾಧ್ಯವಾಗಿರಲಿಲ್ಲ.
Latest Videos