GT vs CSK: ಶುಭ್ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
Shubman Gill's IPL 2026 Blaze: ಶುಭ್ಮನ್ ಗಿಲ್ ಐಪಿಎಲ್ 2026ರಲ್ಲಿ ಸಿಎಸ್ಕೆ ವಿರುದ್ಧ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಸೃಷ್ಟಿಸಿದ್ದಾರೆ. ಈ ಮೂಲಕ 600 ರನ್ ಗಳಿಸಿದ ಮೊದಲ ಆಟಗಾರರಾಗಿ ಹೊರಹೊಮ್ಮಿದ್ದಾರೆ. ಇದು ಅವರ 6ನೇ ಅರ್ಧಶತಕ. ವಾರ್ನರ್ ಮತ್ತು ಗೇಲ್ ಅವರ 600+ ರನ್ ದಾಖಲೆ ಸರಿಗಟ್ಟಿದ ಗಿಲ್, 6000 ಟಿ20 ರನ್ ಹಾಗೂ ಸುದರ್ಶನ್ ಜೊತೆ 10 ಶತಕದ ಜೊತೆಯಾಟದ ಮೂಲಕ ಕೊಹ್ಲಿ-ಎಬಿಡಿ ದಾಖಲೆಯನ್ನೂ ಸರಿಗಟ್ಟಿದ್ದಾರೆ.
2026 ರ ಐಪಿಎಲ್‌ನಲ್ಲಿ ಅದ್ಭುತ ಫಾರ್ಮ್ನಲ್ಲಿರುವ ಶುಭ್ಮನ್ ಗಿಲ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ, ಹಲವಾರು ದಾಖಲೆಗಳನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಗಿಲ್ ಈ ಐಪಿಎಲ್‌ನಲ್ಲಿ 600 ರನ್ಗಳ ಗಡಿ ದಾಟಿದ್ದಾರೆ. ಈ ಮೂಲಕ ಈ ಆವೃತ್ತಿಯಲ್ಲಿ 600 ರನ್ ಗಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಮಾತ್ರವಲ್ಲದೆ ಇದು ಆರನೇ ಅರ್ಧಶತಕವಾಗಿದೆ. ಗಿಲ್, ಲಕ್ನೋ, ಕೆಕೆಆರ್, ರಾಜಸ್ಥಾನ್ ರಾಯಲ್ಸ್, ಕೆಕೆಆರ್, ದೆಹಲಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐವತ್ತಕ್ಕೂ ಹೆಚ್ಚು ರನ್ಗಳ ಇನ್ನಿಂಗ್ಸ್ ಆಡಿದ್ದಾರೆ.
ಐಪಿಎಲ್‌ನಲ್ಲಿ ಮೂರನೇ ಬಾರಿಗೆ 600 ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಗಿಲ್, ವಾರ್ನರ್ ಮತ್ತು ಗೇಲ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದರ ಜೊತೆಗೆ ಗಿಲ್ ಟಿ20 ಕ್ರಿಕೆಟ್‌ನಲ್ಲಿ 6,000 ರನ್‌ಗಳನ್ನು ಪೂರೈಸಿದ್ದಾರೆ. ಗಿಲ್ ಕೇವಲ 185 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದು, 184 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದ ವಿರಾಟ್ ಕೊಹ್ಲಿಯ ನಂತರದ ಸ್ಥಾನದಲ್ಲಿದ್ದಾರೆ. ಕನ್ನಡಿಗ ರಾಹುಲ್ ಕೇವಲ 166 ರನ್ ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಶುಭಮನ್ ಗಿಲ್ ಚೆನ್ನೈ ವಿರುದ್ಧ ಸುದರ್ಶನ್ ಅವರೊಂದಿಗೆ ಶತಕದ ಪಾಲುದಾರಿಕೆಯನ್ನು ಹಂಚಿಕೊಂಡರು. ಈ ಇಬ್ಬರು ಆಟಗಾರರು ಶತಕದ ಪಾಲುದಾರಿಕೆಯನ್ನು ಹಂಚಿಕೊಂಡಿದ್ದು ಇದು 10 ನೇ ಬಾರಿ. ಈ ಮೂಲಕ ಗಿಲ್-ಸುದರ್ಶನ್ ಜೋಡಿ ಡಿವಿಲಿಯರ್ಸ್ ಮತ್ತು ವಿರಾಟ್ ಅವರ ದಾಖಲೆಯನ್ನು ಸರಿಗಟ್ಟಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


