VIDEO: ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಹೊರ ನಡೆದ ಶುಭ್ಮನ್ ಗಿಲ್
India vs South Africa, 1st Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್ನಲ್ಲಿ 159 ರನ್ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಭೋಜನಾ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 138 ರನ್ ಕಲೆಹಾಕಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ವೇಳೆ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಗಾಯಗೊಂಡಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗಿಲ್ 3 ಎಸೆತಗಳಲ್ಲಿ 4 ರನ್ ಬಾರಿಸಿದ್ದರು. ಈ ನಾಲ್ಕು ರನ್ ಮೂಡಿಬಂದಿದ್ದು ಲೆಗ್ ಸೈಡ್ನತ್ತ ಬಾರಿಸಿದ ಫೋರ್ನಿಂದ.
ಈ ಫೋರ್ ಬಾರಿಸಿದಾಗ ಶುಭ್ಮನ್ ಗಿಲ್ ಅವರ ಕುತ್ತಿಗೆ ಭಾಗ ಉಳುಕಿಕೊಂಡಿದೆ. ಹೀಗಾಗಿ ಅವರು ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಮೈದಾನ ತೊರೆದಿದ್ದಾರೆ. ಇದಾಗ್ಯೂ ಅವರು ರಿಟೈರ್ಡ್ ಹರ್ಟ್ ತೆಗೆದುಕೊಂಡಿದ್ದು, ಹಾಗಾಗಿ ಮತ್ತೆ ಬ್ಯಾಟಿಂಗ್ಗೆ ಬರಲು ಅವಕಾಶವಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್ನಲ್ಲಿ 159 ರನ್ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಭೋಜನಾ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 138 ರನ್ ಕಲೆಹಾಕಿದೆ.

