VIDEO: ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಹೊರ ನಡೆದ ಶುಭ್​​ಮನ್ ಗಿಲ್

Updated on: Nov 15, 2025 | 12:12 PM

India vs South Africa, 1st Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್​​ನಲ್ಲಿ 159 ರನ್​ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಭೋಜನಾ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 138 ರನ್ ಕಲೆಹಾಕಿದೆ. 

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ ವೇಳೆ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಗಾಯಗೊಂಡಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗಿಲ್ 3 ಎಸೆತಗಳಲ್ಲಿ 4 ರನ್ ಬಾರಿಸಿದ್ದರು. ಈ ನಾಲ್ಕು ರನ್ ಮೂಡಿಬಂದಿದ್ದು ಲೆಗ್ ಸೈಡ್​ನತ್ತ ಬಾರಿಸಿದ ಫೋರ್​ನಿಂದ.

ಈ ಫೋರ್ ಬಾರಿಸಿದಾಗ ಶುಭ್​​ಮನ್ ಗಿಲ್ ಅವರ ಕುತ್ತಿಗೆ ಭಾಗ ಉಳುಕಿಕೊಂಡಿದೆ. ಹೀಗಾಗಿ ಅವರು ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಮೈದಾನ ತೊರೆದಿದ್ದಾರೆ. ಇದಾಗ್ಯೂ ಅವರು ರಿಟೈರ್ಡ್ ಹರ್ಟ್ ತೆಗೆದುಕೊಂಡಿದ್ದು, ಹಾಗಾಗಿ ಮತ್ತೆ ಬ್ಯಾಟಿಂಗ್​ಗೆ ಬರಲು ಅವಕಾಶವಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್​​ನಲ್ಲಿ 159 ರನ್​ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಭೋಜನಾ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 138 ರನ್ ಕಲೆಹಾಕಿದೆ.

Published on: Nov 15, 2025 12:11 PM
Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More