ಸಿದ್ದಾಪುರ ಕೊಲೆ ಪ್ರಕರಣ: ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ

Edited By:

Updated on: Feb 04, 2026 | 12:05 PM

ಉತ್ತರ ಕನ್ನಡದ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಅವರನ್ನು ಹತ್ಯೆ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಎರಡು ಮಕ್ಕಳ ತಾಯಿ ಸುಚಿತ್ರಾ ಜೊತೆಗಿನ ಅಕ್ರಮ ಸಂಬಂಧವೇ ಈ ಕೊಲೆಗೆ ಕಾರಣ ಎನ್ನಲಾಗಿದೆ. ವಸಂತ್ ಎಂಬುವವರ ಹತ್ಯೆಯ ನಂತರ, ಆಕ್ರೋಶಗೊಂಡ ಗ್ರಾಮಸ್ಥರು ಸಿದ್ದಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಕಾರವಾರ, ಫೆಬ್ರವರಿ 04: ಉತ್ತರ ಕನ್ನಡದ ಸಿದ್ದಾಪುರದಲ್ಲಿ ನಡೆದ ಹತ್ಯೆ ಪ್ರಕರಣ ಸಂಬಂಧ ಎ1 ಸುಚಿತ್ರಾ, ಎ2 ಲೋಕನಾಥ್, ಎ3 ಜ್ಯೋತಿಷಿ ಕಮಲಾಕರ ಭಟ್ ಮತ್ತು ಎ4 ಆಕಾಶ್​​ರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಸಿದ್ದಾಪುರ ಜೆಎಂಎಫ್​ಸಿ ಕೋರ್ಟ್​ ಆದೇಶ ಮಾಡಿದೆ. ಮತ್ತೊಂದೆಡೆ ಕೊಲೆ ಪ್ರಕರಣ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮಸ್ಥರು ಸಿದ್ದಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಕಮಲಾಕರ್ ಭಟ್ ಅವರನ್ನು ಹತ್ತು ನಿಮಿಷಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಆಗ್ರಹಿಸಿದ್ದಾರೆ. ಎರಡು ಮಕ್ಕಳ ತಾಯಿ ಸುಚಿತ್ರಾ ಜೊತೆಗಿನ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧವೇ ಈ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗಿದೆ. ಇದೇ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ವಸಂತ್ ಎಂಬುವವರ ಕೊಲೆ ಸಂಭವಿಸಿತ್ತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 04, 2026 12:01 PM