ಅಹಿಂದ ಸಂಘಟನೆಯ ವಿಷಯದಲ್ಲಿ ಸತೀಶ್ ಜಾರಕಿಹೊಳಿ ಮುಂದಿನ ನಾಯಕನೆಂದು ಒಪ್ಪಿಕೊಂಡ ಸಿದ್ದರಾಮಯ್ಯ

Updated on: Oct 26, 2025 | 1:19 PM

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ಸಂಘಟನೆಯ ಮುನ್ನಡೆ ಕುರಿತಾಗಿ ಪ್ರಮುಖ ಹೇಳಿಕೆ ನೀಡಿದ್ದಾರೆ. ಅಹಿಂದ ಸಂಘಟನೆಯ ವಿಷಯದಲ್ಲಿ ಸತೀಶ್ ಜಾರಕಿಹೊಳಿ ಹೆಸರು ಮುಂದಿನ ನಾಯಕರಾಗಿ ಸ್ಪಷ್ಟವಾಗಿ ತೋರುತ್ತಿದೆ.ಸಿಎಂ ಸಹ ಪರೋಕ್ಷವಾಗಿ ಅದನ್ನು ಒಪ್ಪಿಕೊಂಡಿದ್ದಾರೆ. ಈ ಹೇಳಿಕೆ ಅಹಿಂದ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಬೆಳಗಾವಿ, ಅಕ್ಟೋಬರ್ 26: ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ಸಂಘಟನೆಯ ಮುನ್ನಡೆ ಕುರಿತಾಗಿ ಪ್ರಮುಖ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಅಹಿಂದ ಸಂಘಟನೆಯನ್ನು ನನ್ನ ಅಪ್ಪ ನಡೆಸುತ್ತಿದ್ದರು, ಈಗ ಸತೀಶ್ ಜಾರಕಿಹೊಳಿ ಮುನ್ನಡೆಸುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿರುವ ಯತೀಂದ್ರ, ಯಾರನ್ನು ಲೀಡರ್ ಮಾಡಬೇಕು ಅನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಬಾಯಿ ಮಾತಿಗೆ ಹೇಳಿದರೂ, ಅಹಿಂದ ಸಂಘಟನೆಯ ವಿಷಯದಲ್ಲಿ ಸತೀಶ್ ಜಾರಕಿಹೊಳಿ ಹೆಸರು ಮುಂದಿನ ನಾಯಕರಾಗಿ ಸ್ಪಷ್ಟವಾಗಿ ತೋರುತ್ತಿದೆ. ಸಿಎಂ ಸಹ ಪರೋಕ್ಷವಾಗಿ ಅದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.