ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಗಳು, ಉಗ್ರರಿಗೆ ರಾಜಾತಿಥ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಗಳು ಮತ್ತು ಉಗ್ರರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ವೈರಲ್ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದೇ ವೇಳೆ, ಕಬ್ಬಿನ ದರ ನಿಗದಿ ಕುರಿತು ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತರ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸುವ ಕುರಿತು ಚರ್ಚಿಸಿದ್ದಾರೆ. ಡಿಸಿ ಮಧ್ಯಸ್ಥಿಕೆಯಿಂದ ಪ್ರತಿ ಟನ್‌ಗೆ 3,300 ರೂಪಾಯಿ ನಿಗದಿಗೆ ಒಪ್ಪಿಗೆ ದೊರೆತಿದೆ.
ಬೆಂಗಳೂರು, ನ.8: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿಗಳು ಮತ್ತು ಉಗ್ರರಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ. ಈ ಬಗ್ಗೆ ವಿಡಿಯೋಗಳು ಕೂಡ ವೈರಲ್ ಆಗಿದ್ದು, ಈ ವಿಚಾರವಾಗಿ ಮಾಧ್ಯಮಗಳು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಪ್ರಶ್ನಿಸಿದೆ. ಆದರೆ ಸಿಎಂ ಸಿದ್ದರಾಮಯ್ಯ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ, ಜೈಲಿನಲ್ಲಿ ಮೊಬೈಲ್ ನೀಡಿ ರೌಡಿಗಳು ಮತ್ತು ಉಗ್ರರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಇದೀಗ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿದೆ. ಕೈದಿಗಳಿಗೆ ದೊರೆಯುತ್ತಿರುವ ವಿಐಪಿ ಸೌಲಭ್ಯಗಳು ಮತ್ತು ಮೊಬೈಲ್ ಫೋನ್ಗಳು ದೇಶದ ಭದ್ರತೆಗೆ ಗಂಭೀರ ಸವಾಲೊಡ್ಡಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಆತಂಕ ವ್ಯಕ್ತಪಡಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Nov 08, 2025 01:04 PM

