Karnataka Assembly Polls; ಸಿದ್ದರಾಮಯ್ಯ ಒಂದು ಹೇಳಿದರೆ ಬೊಮ್ಮಾಯಿ ಮತ್ತೊಂದು ಹೇಳ್ತಾರೆ, ಎಲ್ಲವನ್ನೂ ಮತದಾರ ತೀರ್ಮಾನಿಸುತ್ತಾನೆ: ಹೆಚ್ ಡಿ ಕುಮಾರಸ್ವಾಮಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಪಕ್ಷದ ಅಭ್ಯರ್ಥಿ ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಕುಮಾರಸ್ವಾಮಿ ಹೇಳಿದರು
ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ದಿನಾಂಕ ಹತ್ತಿರಗೊಳ್ಳುತ್ತಿದ್ದಂತೆಯೇ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗುತ್ತಿದೆ. ಮತ್ತೊಂದು ಕಡೆ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರಗಳನ್ನು ಸಲ್ಲಿಸುತ್ತಿದ್ದಾರೆ. ಏತನ್ಮಧ್ಯೆ, ಚಿಕ್ಕಬಳ್ಳಾಪುರದಲ್ಲಿ ಇಂದು ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತಾ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಪಕ್ಷದ ಅಭ್ಯರ್ಥಿ ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಹೇಳಿದರು. ವರುಣಾದಲ್ಲಿ ತಮ್ಮನ್ನು ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ನಡುವೆ ಒಳಒಪ್ಪಂದವಾಗಿದೆ ಎಂದು ಸಿದ್ದರಾಮಯ್ಯ (Siddaramaiah) ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅವರು ಅಲ್ಲಿ ಹಾಗೆ ಹೇಳಿದರೆ, ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಒಳಒಪ್ಪಂದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳುತ್ತಾರೆ, ಮತದಾರನೇ ಎಲ್ಲವನ್ನೂ ತೀರ್ಮಾನಿಸುತ್ತಾನೆ, ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
