“ಸರ್ ಸಿದ್ದರಾಮಯ್ಯನವರಿಗೆ ಶೇಕ್‌ಹ್ಯಾಂಡ್ ಕೊಡಿ”: ಜಮೀರ್ ಮಾತಿಗೆ ಮಹದೇವಪ್ಪ ಹೇಳಿದ್ದೇನು ನೋಡಿ?

Edited By:

Updated on: Nov 26, 2026 | 10:31 AM

ಮೈಸೂರಿನ ಸಿದ್ದರಾಮಯ್ಯ ನಿವಾಸದಲ್ಲಿ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಭೇಟಿ ನೀಡಿದರು. ರಾಜಕೀಯ ಭಿನ್ನಾಭಿಪ್ರಾಯ ಮರೆತು ನಾಯಕರು ಒಂದಾಗಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಮ್ಮ ನಾಳೆಯ ಕಾರ್ಯಕ್ರಮ ಸೀಕ್ರೆಟ್ ಟ್ರಿಪ್ ಎಂದರು. ಈ ಭೇಟಿ ರಾಜ್ಯ ರಾಜಕೀಯದಲ್ಲಿ ಕುತೂಹಲ ಹೆಚ್ಚಿಸಿದೆ.

ಮೈಸೂರು, ನ.26: ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಮೈಸೂರಿನಲ್ಲಿರುವ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಈ ಭೇಟಿಯೊಂದಿಗೆ ಈ ಹಿಂದೆ ಇದ್ದ ರಾಜಕೀಯ ಮುನಿಸು ಮರೆತು ಇಬ್ಬರೂ ಪ್ರಮುಖ ಕಾಂಗ್ರೆಸ್ ನಾಯಕರು ಒಂದಾಗಿದ್ದಾರೆ. ಸಿದ್ದರಾಮಯ್ಯ ಅವರ ಪುತ್ರ ಹಾಗೂ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಎಂಎಲ್ ಸಿ ವೇಣುಗೋಪಾಲ ಮತ್ತು ನಸೀರ್ ಅಹ್ಮದ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ವೇಳೆ ಮಾಡಿದ ಅವರು “ನಾನು ಒಂಬತ್ತು ಗಂಟೆಗೆ ಇಲ್ಲೇ ಇರುತ್ತೇನೆ,” ಹೇಳಿದರು. ರಾಮನಗರಕ್ಕೆ ಯಾವಾಗ ಹೋಗುತ್ತೀರಿ ಎಂದು ಕೇಳಿದಾಗ, ಅವರು, “ನಾಳೆ ಸೀಕ್ರೆಟ್ ಟ್ರಿಪ್” ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದರು. ಹೆಚ್ಚಿನ ರಾಜಕೀಯ ವಿಷಯಗಳ ಬಗ್ಗೆ ಮಾತನಾಡಲು ನಿರಾಕರಿಸಿದ ಸಿದ್ದರಾಮಯ್ಯ, “ನಾನು ಮಾತಾಡಲ್ಲ” ಎಂದು ಸ್ಪಷ್ಟಪಡಿಸಿದರು. ಸಿದ್ದರಾಮಯ್ಯ ಮತ್ತು ಹೆಚ್.ಸಿ.ಮಹದೇವಪ್ಪ ಅವರ ಈ ಭೇಟಿ ಮತ್ತು ಅದಕ್ಕೆ ಸಂಬಂಧಿಸಿದ ಮಾಧ್ಯಮಗಳೊಂದಿಗಿನ ಸಂಕ್ಷಿಪ್ತ ಸಂವಾದ ರಾಜ್ಯ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಈ ವೇಳೆ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಅವರು ಮನೆಯಿಂದ ಹೊರಗಡೆ ಬರುವಾಗ ಸಿದ್ದರಾಮಯ್ಯ ಅವರಿಗೆ ಶೇಕ್​​​ಹ್ಯಾಂಡ್​ ಮಾಡುವಂತೆ ಜಮೀರ್​​ ಅವರು ಮಹದೇವಪ್ಪ ಅವರಿಗೆ ಹೇಳುತ್ತಾರೆ. ಇದಕ್ಕೆ ಮಹದೇವಪ್ಪ ಅವರ ಪ್ರತಿಕ್ರಿಯೆ ಹೇಗಿತ್ತು ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 26, 2026 10:28 AM
Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More