ಡಿಜಿ, ಐಜಿಪಿ ಜೊತೆ ಅಜ್ಞಾತ ಸ್ಥಳಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್

| Updated By: ರಮೇಶ್ ಬಿ. ಜವಳಗೇರಾ

Updated on: Jul 30, 2023 | 2:39 PM

ಉಡುಪಿ ಕಾಜೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರ ಪ್ರಕರಣ ಮಧ್ಯೆ ಸಿಎಂ ಸಿದ್ದರಾಮಯ್ಯ,, ಗೃಹ ಸಚಿವ ಪರಮೇಶ್ವರ್​ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶರನ್ನು ಕರೆದುಕೊಂಡು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

ಬೆಂಗಳೂರು, (ಜುಲೈ 30): ಕರ್ನಾಟಕದ ಡಿಜಿ, ಐಜಿಪಿ ಅಲೋಕ್ ಮೋಹನ್ (Alok Mohan) ಅವರನ್ನು ಕರೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್(Dr G parameshwar) ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೆಲ ವಿಚಾರಗಳ ಚರ್ಚೆ ಮಾಡಲೆಂದು ಗೃಹ ಸಚಿವ ಪರಮೇಶ್ವರ್ ಅವರು ಇಂದು (ಜುಲೈ 30) ಬೆಳಗ್ಗೆ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ್ದರು. ಬಳಿಕ ಸಿದ್ದರಾಮಯ್ಯ, ಪರಮೇಶ್ವರ್ ಅವರು ಡಿಜಿ, ಐಜಿಪಿ ಅಲೋಕ್ ಮೋಹನ್ ಅಜ್ಞಾತ ಸ್ಥಳಕ್ಕೆ ಹೋಗಿದ್ದಾರೆ. ಬೆಂಗಾವಲು ವಾಹನ ಬಿಟ್ಟು ಸಿಎಂ ತಮ್ಮ ನಿವಾಸದಿಂದ ಒಂದೇ ಕಾರಿನಲ್ಲಿ ಸಿಎಂ, ಗೃಹ ಸಚಿವ, ಡಿಜಿ & ಐಜಿಪಿ ತೆರಳಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರದ ಮೇಲೆ ಮುಗಿಬಿದ್ದಿವೆ. ಇದರ ಬೆನ್ನಲ್ಲೇ ಸಿಎಂ ಹಾಗೂ ಗೃಹ ಸಚಿವ ಪರಮೇಶ್ವರ್ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶರು ಅಜ್ಞಾತ ಸ್ಥಳಕ್ಕೆ ಹೋಗಿರುವುದು ಸಂಚಲನ ಮೂಡಿಸಿದೆ.