Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru; ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು: ಸಿಟಿ ರವಿ

Bengaluru; ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು: ಸಿಟಿ ರವಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 08, 2023 | 11:02 AM

ಸಿದ್ದರಾಮಯ್ಯ ಅಂಕಿ ಅಂಶಗಳನ್ನು ಪ್ರಸ್ತಾಪಿಸುತ್ತಲೇ ಸುಳ್ಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುತ್ತಾರೆ ಎಂದು ರವಿ ಕುಟುಕಿದರು.

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳಿದರು. ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ಮಾತಾಡಿದ ರವಿ, ಅಂಕಿ ಅಂಶಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ, ಆದರೆ ಸಿದ್ದರಾಮಯ್ಯ ಅಂಕಿ ಅಂಶಗಳನ್ನು ಪ್ರಸ್ತಾಪಿಸುತ್ತಲೇ ಸುಳ್ಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುತ್ತಾರೆ ಎಂದು ಕುಟುಕಿದರು. ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ರಾಜ್ಯಕ್ಕೆ ಕೇವಲ 18,000-20,000 ಕೋಟಿ ರೂ.ಗಳಷ್ಟು ಸಹಾಯ ಧನ, ಅನುದಾನದ ರೂಪದಲ್ಲಿ ಬರುತಿತ್ತು ಆದರೆ ಈಗ 50,000 ಕೋಟಿ ರೂ.ಗಳಿಗಿಂತ ಜಾಸ್ತಿ ಬರುತ್ತಿದೆ ಎಂದು ರವಿ ಹೇಳಿದರು. ಮನಮೋಹನ್ ಸಿಂಗ್ (Manmohan Singh) ಪ್ರಧಾನ ಮಂತ್ರಿಯಾಗಿದ್ದ 10 ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ನೀಡಿರುವರೆಂದು ಸಿದ್ದರಾಮ್ಯಯ್ಯ ಯಾವತ್ತೂ ಹೇಳುವುದಿಲ್ಲ ಎಂದು ಮಾಜಿ ಶಾಸಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ