Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧಿಗಳನ್ನು ರಾಜಕೀಯವಾಗಿ ಮುಗಿಸುವ ಕಲೆ ಸಿದ್ದರಾಮಯ್ಯ ಮತ್ತು ಶಿವಕುಮಾರ್​ಗೆ ಕರಗತವಾಗಿದೆ: ಪ್ರಲ್ಹಾದ್ ಜೋಶಿ

ವಿರೋಧಿಗಳನ್ನು ರಾಜಕೀಯವಾಗಿ ಮುಗಿಸುವ ಕಲೆ ಸಿದ್ದರಾಮಯ್ಯ ಮತ್ತು ಶಿವಕುಮಾರ್​ಗೆ ಕರಗತವಾಗಿದೆ: ಪ್ರಲ್ಹಾದ್ ಜೋಶಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 23, 2024 | 5:04 PM

ಅಸಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕುಮಾರಸ್ವಾಮಿ ವಿರುದ್ಧ ಬದ್ಧ ರಾಜಕೀಯ ದ್ವೇಷ, ಲೋಕಸಭಾ ಚುನಾವಣೆಯಲ್ಲಿ ಮತ್ತು ನಂತರ ಕುಮಾರಸ್ವಾಮಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾಷಣಹಳನ್ನು ಮಾಡಿದ್ದು ಅವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಹುಬ್ಬಳ್ಳಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮುಂಬರುವ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಜನರ ಮುಂದೆ ಪರೇಡ್ ಮಾಡುವ ಸನ್ನಿವೇಶ ಸೃಷ್ಟಿಯಾಗಲಿದೆ ಎಂದು ಹೇಳಿದರು. ಹೆಚ್ ಡಿ ಕುಮಾರಸ್ವಾಮಿಯವರನ್ನು ರಾಜಕೀಯ ಮುಗಿಸುವ ಷಡ್ಯಂತ್ರ ಬಿಜೆಪಿ ಖಂಡಿತವಾಗಿಯೂ ಮಾಡುತ್ತಿಲ್ಲ, ಆ ಕೆಲಸದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ ಸಿದ್ಧಹಸ್ತರು, ಯಾಕೆಂದರೆ 2018ರಲ್ಲಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿ ನಂತರ ಶಾಸಕರಿಂದ ರಾಜೀನಾಮೆ ಕೊಡಿಸಿ ಸರ್ಕಾರ ಉರುಳುವಂತೆ ಮಾಡಿದ್ದು ಅವರೇ. ಹಾಗಾಗಿ ವಿರೋಧಿಗಳನ್ನು ರಾಜಕೀಯಗಿ ಮುಗಿಸುವ ಕಲೆ ಅವರಿಗೆ ಕರಗತವಾಗಿದೆ ಎಂದು ಜೋಶಿ ಹೇಳಿದರು. 2014 ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಪಾಲರೇ ಇದ್ದರಲ್ಲ, ಅಗ ಯಾಕೆ ಕಾಂಗ್ರೆಸ್ ಸರ್ಕಾರ ಕುಮಾರಸ್ವಾಮಿಯವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಲಿಲ್ಲ ಎಂದು ಕೇಂದ್ರ ಸಚಿವ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ! ಮುಡಾ ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ