R Ashoka commits faux pause; ಸರ್ಕಾರ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆಯೊಡ್ಡಿದೆ, ಕಾಂಗ್ರೆಸ್ ಅಂದ್ರೆ ಗೂಂಡಾಗಿರಿ: ಆರ್ ಅಶೋಕ, ಬಿಜೆಪಿ ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: May 24, 2023 | 6:14 PM

ಸರ್ಕಾರ ಅಸ್ತಿತ್ವಕ್ಕೆ ಬಂದು 3-4 ದಿನಗಳಾಗಿವೆ ಮತ್ತು ಜೂನ್ ಆರಂಭವಾಗಲು ಇನ್ನೂ ಒಂದು ವಾರ ಬಾಕಿಯಿದೆ, ಆದರೆ ಮಾಜಿ ಸಚಿವರು ಸರ್ಕಾರ ಬಂದು ಮತ್ತು ಜೂನ್ ಕಳೆದು ಬಹಳ ದಿನಗಳಾಯ್ತು ಅನ್ನುತ್ತಾರೆ!!   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನಿನ್ನೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರಿಗೆ ಬೆದರಿಕೆ ಹಾಕಿದ್ದಾರೆ, ಕಾಂಗ್ರೆಸ್ ಅಂದರೆ ಗೂಂಡಾಗಿರಿ, ಗೂಂಡಾಗಿರಿ ಅಂದರೆ ಕಾಂಗ್ರೆಸ್, ಎಂದು ಬಿಜೆಪಿ ಶಾಸಕ ಆರ್ ಅಶೋಕ (R Ashoka) ಇಂದು ಬೆಂಗಳೂರಲ್ಲಿ ಹೇಳಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೊದಲ ಸಂಪುಟ ಸಭೆಯಲ್ಲೇ ಜನತೆಗೆ ನೀಡಿದ ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಹೇಳಿತ್ತು. ಸಭೆಯಲ್ಲಿ ಅಡ್ಡಗೋಡೆ ಮೇಲೆ ದೀಪವಿಟ್ಟ ರೀತಿಯಲ್ಲಿ ಗ್ಯಾರಂಟಿಗಳಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಹೇಳಿದ ಅವರು ಆವೇಶದ ಭರದಲ್ಲಿ ಮಾತಾಡುವಾಗ ಎಡವಿದರು. ಕಾಂಗ್ರೆಸ್ ಪಕ್ಷ ಜೂನ್ ತಿಂಗಳಲ್ಲಿ ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಹೇಳಿತ್ತು, ಆದರೆ ಜೂನ್ ಕಳೆದು ಬಹಳ ದಿನಗಳಾಯ್ತು ಎಂದು ಅಶೋಕ ಹೇಳಿದರು! ಸರ್ಕಾರ ಅಸ್ತಿತ್ವಕ್ಕೆ ಬಂದು 3-4 ದಿನಗಳಾಗಿವೆ ಮತ್ತು ಜೂನ್ ಆರಂಭವಾಗಲು ಇನ್ನೂ ಒಂದು ವಾರ ಬಾಕಿಯಿದೆ, ಆದರೆ ಮಾಜಿ ಸಚಿವರು ಸರ್ಕಾರ ಬಂದು ಮತ್ತು ಜೂನ್ ಕಳೆದು ಬಹಳ ದಿನಗಳಾಯ್ತು ಅನ್ನುತ್ತಾರೆ!!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: May 24, 2023 06:07 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.