Top cops warned: ಹಿಂದಿನ ಸರ್ಕಾರದಲ್ಲಿ ಮಾಡಿದ ತಪ್ಪುಗಳನ್ನು ಪುನರಾವರ್ತಿಸದಂತೆ ಪೊಲೀಸ್ ಅಧಿಕಾರಿಗಳಿಗೆ ಸಿದ್ದರಾಮಯ್ಯ, ಶಿವಕುಮಾರ್ ಎಚ್ಚರಿಕೆ
ಗೂಂಡಾಗಿರಿ, ಡ್ರಗ್ಸ್, ನೈತಿಕ ಪೊಲೀಸ್ ಗಿರಿ, ಮೊದಲಾದ ಕಾನೂನುಬಾಹಿರ ಚಟುವಟಿಕೆಗಳು ನಿಲ್ಲಬೇಕು ಎಂದು ಮುಖ್ಯಮಂತ್ರಿಗಳು ಎಚ್ಚರಿಸಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಬೇರೆ ಬೇರೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ. ಈ ವಿಡಿಯೋದಲ್ಲಿ ಅವರು ನಗರದ ಪೊಲೀಸ್ ಅಧಿಕಾರಿಗಳೊಂದಿಗೆ (top police officials) ಸಭೆ ನಡೆಸುತ್ತಿರುವುದನ್ನು ನೋಡಬಹುದು. ಲಭ್ಯವಿರುವ ಮೂಲಗಳ ಪ್ರಕಾರ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಹಿಂದಿನ ಸರ್ಕಾರದಲ್ಲಿ ಮಾಡಿದ ತಪ್ಪುಗಳು ಮರುಕಳಿಸಿದಂತೆ ಎಚ್ಚರವಹಿಸಲು ಸೂಚಿಸಿದ್ದಾರೆ. ಗೂಂಡಾಗಿರಿ, ಡ್ರಗ್ಸ್, ನೈತಿಕ ಪೊಲೀಸ್ ಗಿರಿ (moral policing), ಮೊದಲಾದ ಕಾನೂನುಬಾಹಿರ ಚಟುವಟಿಕೆಗಳು ನಿಲ್ಲಬೇಕು; ಇಲ್ಲದಿದ್ದರೆ, ಅಯಾ ವಿಭಾಗದ ಡಿಸಿಪಿ, ಎಸಿಪಿ ಮತ್ತು ಎಸ್ ಪಿಗಳನ್ನು ಹೊಣೆಗಾರನ್ನಾಗಿಸಿ ಕ್ರಮ ಜರುಗಿಸಲಾಗುವುದೆಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದು ಗೊತ್ತಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ