ಸಿದ್ದರಾಮಯ್ಯ ಮತ್ತು ಶಿವಕುಮಾರ್ ದಿಗ್ಗಜರು, ಧೀಮಂತ ನಾಯಕರು ಮತ್ತು ಮಣ್ಣಿನ ಮಕ್ಕಳು: ಸೋಮಶೇಖರ್

ಅರುಣ್​ ಕುಮಾರ್​ ಬೆಳ್ಳಿ

Updated on: Apr 18, 2025 | 4:10 PM

ರಾಜಕೀಯವಾಗಿ ಬೆಳೆಯಲು ತನಗೆ ಎಲ್ಲ ರೀತಿಯ ಮತ್ತು ಪ್ರತಿ ಹಂತದಲ್ಲಿ ಸಹಾಯ ಮಾಡಿದ್ದು ಶಿವಕುಮಾರ್, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅವರು ಅದರ ಅಭಿವೃದ್ಧಿಗೆ ಪಣತೊಟ್ಟು ನಿಂತಿದ್ದಾರೆ, ನಗರದಲ್ಲಿ ವ್ಹೈಟ್ ಟಾಪಿಂಗ್ ಮತ್ತು ಪ್ರಮುಖ ರಸ್ತೆಗಳ ಡಾಂಬರೀಕರಣ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ, ಬೆಂಗಳೂರು ಅಬಿವೃದ್ಧಿಗೆ ಸಿಎಂ 1ಲಕ್ಷ ಕೋಟಿ ರೂ ಬಿಡುಗಡೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಹೇಳಿದರು.

ಬೆಂಗಳೂರು, ಏಪ್ರಿಲ್ 18: ಕಾಂಗ್ರೆಸ್ ಪಕ್ಷದ ಶಾಸಕರು ತಮ್ಮ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯನ್ನು ಈ ಪಾಟಿ ಹೊಗಳಿರಲಿಕ್ಕಿಲ್ಲ. ಎಸ್ ಟಿ ಸೋಮಶೇಖರ್ ಹಿಂದೆ ಕಾಂಗ್ರೆಸ್​ನಲ್ಲಿದ್ದಿದ್ದು ನಿಜ, ಅದರೆ ಅವರೀಗ ಬಿಜೆಪಿಯ ಹಾಲಿ ಸದಸ್ಯರು. ಇವತ್ತು ನಗರದಲ್ಲಿ ನಡೆದ ಕಲಿದೇವ ಕನ್ವೆನ್ಶನ್ ಹಾಲ್ ಉದ್ಘಾಟನಾ ಸಮಾರಂಭದಲ್ಲಿ ಸೋಮಶೇಖರ್, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ (Siddaramaiah and DK Shivakumar) ಅವರನ್ನು ಮನಸಾರೆ ಕೊಂಡಾಡುತ್ತಾ ಕರ್ನಾಟಕ ರಾಜಕೀಯದ ದಿಗ್ಗಜರು, ಧೀಮಂತ ನಾಯಕರು ಮಣ್ಣಿನ ಮಕ್ಕಳು, ಒಗ್ಗಟ್ಟಾಗಿ ಬೆಂಗಳೂರು ಮತ್ತು ಕರ್ನಾಟಕ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ:ಪಕ್ಷವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುವವರಿಗೆ ನೋಟೀಸ್ ಇಲ್ಲ, ಅದರೆ ನನಗೆ ನೀಡುತ್ತಾರೆ: ಸೋಮಶೇಖರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.