ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪಕ್ಷದ ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ (Raghu Achar) ಅವರ ನೂತನ ಗೃಹ ಪ್ರವೇಶ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೆಲಿಕಾಪ್ಟರ್ನಲ್ಲಿ ಆಗಮಿಸಿದರು. ಜಿಲ್ಲೆಯ ಕ್ಯಾದಿಗ್ಗೆರೆಯಲ್ಲಿ ಆಚಾರ್ ಅವರು ಮನೆಯನ್ನು ಕಟ್ಟಿಸಿ ಅದಕ್ಕೆ ಪ್ರಕೃತಿ ಅಂತ ಹೆಸರಿಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ (Shivarathri Deshikendra Swamiji) ಹಾಗೂ ಬೇರೆ ಹಲವು ಮಠಾಧೀಶರ ಸಮ್ಮುಖದಲ್ಲಿ ಏರ್ಪಡಿಸಲಾಗಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲೂ ಮಾಜಿ ಮುಖ್ಯಮಂತ್ರಿಯವರು ಪಾಲ್ಗೊಂಡರು. ವಿಧಾನಸಭಾ ಚುನಾವಣೆಯಲ್ಲಿ ಆಚಾರ್ ಗೆ ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಸಿದ್ದರಾಮಯ್ಯನವರನ್ನು ಆಗ್ರಹಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ