ಸಿದ್ದರಾಮಯ್ಯ-ಯಡಿಯೂರಪ್ಪ ನಡುವೆ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ: ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 17, 2025 | 4:50 PM

ಸಿಗಂದೂರು ಚೌಡೇಶ್ವರಿ ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಇಲ್ಲದ್ದೊಂದು ನೆಪಹೇಳಿ ಭಾಗವಹಿಸದೇ ಹೋಗಿದ್ದು ಯಡಿಯೂರಪ್ಪನವರೊಂದಿಗೆ ಹೊಂದಾಣಿಕೆಯ ಭಾಗವಲ್ಲದೆ ಮತ್ತೇನೂ ಅಲ್ಲ. ಖುದ್ದು ನಿತಿನ್ ಗಡ್ಕರಿ ಅವರೇ ಸಿದ್ದರಾಮಯ್ಯಗೆ ಎರಡು ಸಲ ಪತ್ರ ಬರೆದಿದ್ದಾರೆ, ಹಾಗಾಗಿ ಸಿದ್ದರಾಮಯ್ಯ ತನ್ನನ್ನು ಕರೆದಿಲ್ಲ ಅಂತ ಹೇಳೋದು ತಪ್ಪು, ಅಸಲಿಗೆ ಯಡಿಯೂರಪ್ಪನೇ ಅವರಿಗೆ ಬರಬೇಡವೆಂದು ಹೇಳಿದ್ದರು ಅಂತ ಯತ್ನಾಳ್ ಹೇಳಿದರು.

ಬೆಂಗಳೂರು, ಜುಲೈ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ನಡುವೆ ಭಾರೀ ಹೊಂದಾಣಿಕೆ ಇದೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರು ಲೂಟಿ ಮಾಡಬೇಕು ಮತ್ತು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ಕುಟುಂಬ ಲೂಟಿ ಮಾಡಬೇಕು- ಅವರಿಬ್ಬರ ನಡುವೆ ಆಗಿರುವ ಒಪ್ಪಂದ ಅದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸಿದ್ದಾಗ ಯಡಿಯೂರಪ್ಪ ಮೈಸೂರು ಭಾಗದಲ್ಲಿ ಪ್ರಭಾವೀ ಲಿಂಗಾಯತ ನಾಯಕನಾಗಿದ್ದರೂ ಭಾಷಣ ಮಾಡದೆ ಏನೋ ಸಬೂಬು ಹೇಳಿ ತಪ್ಪಿಸಿಕೊಂಡರು. ಹಾಗೆಯೇ, ಶಿಕಾರಿಪುರದಲ್ಲಿ ವಿಜಯೇಂದ್ರ ವಿರುದ್ಧ ಸಿದ್ದರಾಮಯ್ಯ ಒಬ್ಬ ದುರ್ಬಲ ಅಭ್ಯರ್ಥಿಯನ್ನು ಹಾಕಿಸಿದ್ದರು. ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯಗೆ ತಮ್ಮ ಮಗ ಯತೀಂದ್ರರನ್ನು ಬೇಳಸೋದು ಬೇಕು ಯಡಿಯೂರಪ್ಪಗೆ ಮಗ ವಿಜಯೇಂದ್ರನನ್ನು ಎಂದು ಯತ್ನಾಳ್ ಹೇಳಿದರು.

ಇದನ್ನೂ ಓದಿ:   ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭಸುದ್ದಿ: ಸಂಚಲನ ಸೃಷ್ಟಿಸಿದ ಯತ್ನಾಳ್ ಹೆಸರಿನ ಪೋಸ್ಟ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.