ಶುಭಾಶಯ ತಿಳಿಸಲು ಬಂದ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ತೇಜಸ್ವಿ ಸೂರ್ಯ ದಂಪತಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ತೇಜಸ್ವಿ ಸೂರ್ಯ ಮದ್ವೆ ಆರತಕ್ಷತೆಯಲ್ಲಿ ಭಾಗವಹಿಸಿ ಶುಭಾಶಯ ಕೋರಿದ್ದಾರೆ. ಇನ್ನು ಇದೇ ವೇಳೆ ತೇಜಸ್ವಿ ಸೂರ್ಯ ದಂಪತಿ ಸಿದ್ದರಾಮಯ್ಯನವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿತು. ಅಲ್ಲದೇ ಈ ವೇಳೆ ತೇಜಸ್ವಿ ಸೂರ್ಯ ತನ್ನ ಮಡದಿಗೆ ಸಿಎಂ ಪರಿಚಯ ಮಾಡಿಕೊಟ್ಟರು.
ಬೆಂಗಳೂರು, (ಮಾರ್ಚ್ 09): ಮೊನ್ನೆ ಅಷ್ಟೇ ಬಿಜೆಪಿ ಯುವನಾಯಕ, ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇಂದು (ಮಾರ್ಚ್ 09) ಬೆಂಗಳೂರಿನ ಅರಮನೆ ಮೈದಾನದಲ್ಲಿ ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ ಅದ್ಧೂರಿಯಾಗಿ ನಡೆದಿದೆ. ತೇಜಸ್ವಿ ಸೂರ್ಯ, ಶಿವಶ್ರೀ ಸ್ಕಂದಪ್ರಸಾದ್ ಮದುವೆಯ ಆರತಕ್ಷತೆಗೆ ಗಣ್ಯಾತಿಗಣ್ಯರ ದಂಡೇ ಹರಿದು ಬಂದಿದೆ. ಸಿನಿಮಾ ತಾರೆಯರು, ಕಾಂಗ್ರೆಸ್, ಬಿಜೆಪಿ ಪಕ್ಷದ ಹಲವು ಮುಖಂಡರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಆರತಕ್ಷತೆಯಲ್ಲಿ ಭಾಗವಹಿಸಿ ಮದುವೆಯ ಶುಭಾಶಯ ಕೋರಿದ್ದಾರೆ. ಇನ್ನು ಇದೇ ವೇಳೆ ತೇಜಸ್ವಿ ಸೂರ್ಯ ಅವರು ಸಿದ್ದರಾಮಯ್ಯನವರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು.