AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಸಿಎಂ ಪದಗ್ರಹಣದ ಬಗ್ಗೆ ಪ್ರಶ್ನಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಫುಲ್ ಗರಂ

ಡಿಕೆಶಿ ಸಿಎಂ ಪದಗ್ರಹಣದ ಬಗ್ಗೆ ಪ್ರಶ್ನಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಫುಲ್ ಗರಂ

ರಮೇಶ್ ಬಿ. ಜವಳಗೇರಾ
|

Updated on: Oct 31, 2025 | 4:31 PM

Share

ಡಿಕೆ ಶಿವಕುಮಾರ್ (D.K.Shivakumar) ಅವರು ನವೆಂಬರ್ 21 ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ಎಂಬ ಅಂತೆ ಕಂತೆ ಚರ್ಚೆ ಜೋರಾಗಿದೆ.ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಗರಂ ಆಗಿದ್ದಾರೆ. ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯದ ಜತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಎಂಗೆ ಡಿಕೆಶಿ ಪದಗ್ರಹಣ ಬಗ್ಗೆ ಪ್ರಶ್ನಿಸಲಾಯ್ತು.

ಬೆಂಗಳೂರು, (ಅಕ್ಟೋಬರ್ 31): ಡಿಕೆ ಶಿವಕುಮಾರ್ (D.K.Shivakumar) ಅವರು ನವೆಂಬರ್ 21 ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ಎಂಬ ಅಂತೆ ಕಂತೆ ಚರ್ಚೆ ಜೋರಾಗಿದೆ.ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಗರಂ ಆಗಿದ್ದಾರೆ. ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯದ ಜತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಎಂಗೆ ಡಿಕೆಶಿ ಪದಗ್ರಹಣ ಬಗ್ಗೆ ಪ್ರಶ್ನಿಸಲಾಯ್ತು. ಇದರಿಂದ ಗರಂ ಆದ ಸಿದ್ದರಾಮಯ್ಯ, ಯಾರ್ ಹೇಳಿದ್ದು? ನಿನಗೆ ಯಾರ್ ಹೇಳಿದ್ರು? ನಿನಗೆ ಹೆಂಗೆ ಗೊತ್ತಾಯ್ತು? ಯಾವ ಪತ್ರಿಕೆ? ಯಾಬ ಪತ್ರಿಕೆ ನೋಡಿದೆ ನೀನು? ನಾನು ಎಲ್ಲಾ ಪತ್ರಿಕೆ ಓದುತ್ತೇನೆ. ಯಾವುದರಲ್ಲೂ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಬಳಿಕ ಪತ್ರಿಕೆಯ ಹೆಸರು ಹೇಳಿದಾಗ, ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು.